ADVERTISEMENT

ಚಿಕ್ಕಬಳ್ಳಾಪುರ: ಮನರೇಗಾ ಬಚಾವ್ ಸಂಗ್ರಾಮಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 7:25 IST
Last Updated 23 ಫೆಬ್ರುವರಿ 2026, 7:25 IST
   

ಚಿಕ್ಕಬಳ್ಳಾಪುರ: ನಗರ ಹೊರವಲಯದ ಅಗಲಗುರ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರ ಬಳಿ ಕಾಂಗ್ರೆಸ್ ಹಮ್ಮಿಕೊಂಡಿರುವ ಮನರೇಗಾ ಬಚಾವ್ ಸಂಗ್ರಾಮ ಪ್ರತಿಭಟನಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಳಗೊಂಡು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು, ಕಾಂಗ್ರೆಸ್ ರಾಜ್ಯ ಮುಖಂಡರು ಪಾಲ್ಗೊಳ್ಳುವರು.

ADVERTISEMENT

ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ.

ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಕೆ.ಎಚ್.ಮುನಿಯಪ್ಪ, ಕೃಷ್ಣಬೈರೇಗೌಡ, ಶಾಸಕರಾದ ತನ್ವೀರ್ ಸೇಠ್, ಕೆ.ಎಚ್.ಪುಟ್ಟ ಸ್ವಾಮಿಗೌಡ, ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಈಗಾಗಲೇ ವೇದಿಕೆಯಲ್ಲಿ ಆಸೀನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.