ADVERTISEMENT

ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತನ‌ ಮೇಲೆ ಪ್ರಕರಣ: ಠಾಣೆಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 9 ಮೇ 2022, 7:53 IST
Last Updated 9 ಮೇ 2022, 7:53 IST
   

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಕಾರ್ಯಕರ್ತ ಸಂತೋಷ್ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂಭಾಗದ ಗೌರಿಬಿದನೂರು ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೇ 14 ಮತ್ತು 15 ರಂದು ನಗರದಲ್ಲಿ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ. ಎಚ್.ಎನ್.ವ್ಯಾಲಿ ಕೊಳಚೆ ನೀರು ಕುಡಿಸಿ ಈಗ ರಕ್ತ ಪರೀಕ್ಷೆ ಮಾಡಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದ್ದರು. ಇದನ್ನು ಅನಿಲ್ ಎಂಬುವವರು ವಿಡಿಯೊ ಮಾಡಿದ್ದಾರೆ.

ಸಚಿವ ಸುಧಾಕರ್ ಅಣತಿಯಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಸಚಿವ ಸುಧಾಕರ್ ಅಯೋಗ್ಯ ಎಂದು ಟೀಕಿಸಿದರು.

ADVERTISEMENT

ಡಾ.ಕೆ.ಸುಧಾಕರ್ ದ್ದು ಹಿಟ್ಲರ್ ಆಡಳಿತ ಎಂದು ಟೀಕಿಸಿದರು. ಭ್ರಷ್ಟ ಸುಧಾಕರ ಗೆ ಧಿಕ್ಕಾರ, ಚೇಲಾಗಳ ಕೈಯಲ್ಲಿ ದೂರು ಕೊಡಿಸುವ ಸುಧಾಕರ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ಮೂವರು ಮಾಜಿ ಶಾಸಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಕರಣ ದ ಹಿಂದೆ ಸುಧಾಕರ್ ಇದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ರು ಪ್ರತಿಭಟನೆ ಸಹ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.