ADVERTISEMENT

ಅನಗತ್ಯವಾಗಿ ಸಾರ್ವಜನಿಕರ ಅಲೆಸದಿರಿ: ಎನ್‌. ಎಂ. ನಾಗರಾಜ್‌

ಬಾಗೇಪಲ್ಲಿ ತಾಲ್ಲೂಕು ಕಚೇರಿ, ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 4:41 IST
Last Updated 17 ಆಗಸ್ಟ್ 2022, 4:41 IST
ಬಾಗೇಪಲ್ಲಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ರೋಗಿಗಳ ಯೋಗಕ್ಷೇಮ ವಿಚಾರಿಸಿದರು
ಬಾಗೇಪಲ್ಲಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ರೋಗಿಗಳ ಯೋಗಕ್ಷೇಮ ವಿಚಾರಿಸಿದರು   

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಹಾಗೂ ತಾಲ್ಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರು ಮತ್ತು ರೋಗಿಗಳ ಸಮಸ್ಯೆಗಳನ್ನು ಆಲಿಸಿದರು.

ರಾಜ್ಯ ಸರ್ಕಾರದ ಆದೇಶದ ಅನ್ವಯ ಪ್ರತಿ ಮಂಗಳವಾರ ಜಿಲ್ಲೆಯ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ್ದರು.

ಈ ವೇಳೆವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಆಧಾರ್ ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ‌ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ADVERTISEMENT

ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು. ತ್ವರಿತವಾಗಿ ಕೆಲಸಗಳನ್ನು ಮಾಡಿಕೊಡಬೇಕು. ಸಮಸ್ಯೆಗಳ ವಿಲೇವಾರಿಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಸೂಚಿಸಿದರು.

ತಾಲ್ಲೂಕು ಆಡಳಿತದಲ್ಲಿನ ಸಿಬ್ಬಂದಿಯ ಕೊರತೆ, ಸಾರ್ವಜನಿಕರಿಗೆ ಒದಗಿಸುವ ಸೇವೆ, ಜನರ ಕುಂದು ಕೊರತೆಗಳನ್ನು , ಆಡಳಿತದ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ಕೆಲಸದಲ್ಲಿ ಸುಧಾರಣೆ ಅಗತ್ಯ. ಜನರಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ನಂತರತಾಲ್ಲೂಕು ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ವೇಳೆ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು. ರೋಗಿಗಳು ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ಆಸ್ಪತ್ರೆಯ ಸ್ವಚ್ಛತೆ, ನಿರ್ವಹಣೆಯ ಕುರಿತು ವೈದ್ಯಾಧಿಕಾರಿಗೆ ಸೂಚನೆಗಳನ್ನು ನೀಡಿದರು.

ತಹಶೀಲ್ದಾರ್ ವೈ.ವಿ ರವಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.