ಬಂಧನ
(ಪ್ರಾತಿನಿಧಿಕ ಚಿತ್ರ)
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟಿ ಅಡ್ಡಾದಿಡ್ಡಿ ಚಲಾಯಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಮಹಿಳೆಯರೊಬ್ಬರು ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ವಾಪಸಂದ್ರ ಮೇಲ್ಸೇತುವೆ ಬಳಿ ಸ್ಕೂಟಿಯಲ್ಲಿ ಬಾಗೇಪಲ್ಲಿ ಕಡೆಯಿಂದ ರಿಂಬಿಕಾ (28) ಬರುತ್ತಿದ್ದರು. ತಮಿಳುನಾಡು ಮೂಲದ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಡ್ಡಾದಿಡ್ಡಿ ಚಾಲನೆ ಮಾಡಿದ್ದನ್ನು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ನಿಖಿಲ್ ಹಾಗೂ ನರಸಿಂಹಮೂರ್ತಿ ಪ್ರಶ್ನಿಸಿದರು.
‘ನಿಮ್ಮನ್ನು ಪೊಲೀಸರಿಗೆ ಒಪ್ಪಿಸುತ್ತೇವೆ’ ಎಂದು ಯುವಕರು ಹೇಳಿದರು. ಆಗ ತನ್ನ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಸಣ್ಣ ಚಾಕುವಿನಿಂದ ನಿಖಿಲ್ ಮೇಲೆ ರಿಂಬಿಕಾ ದಾಳಿ ಮಾಡಿದ್ದು, ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.