ADVERTISEMENT

9 ತಿಂಗಳ ನಂತರ ಚಿಕ್ಕಬಳ್ಳಾಪುರ ಈಶಾ ಕೇಂದ್ರಕ್ಕೆ ಸದ್ಗುರು

ಜಗ್ಗಿ ವಾಸುದೇವ್ ಆಗಮನಕ್ಕೆ ಕಳೆಗಟ್ಟಿದ ಈಶಾ ಕೇಂದ್ರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2024, 11:10 IST
Last Updated 22 ಡಿಸೆಂಬರ್ 2024, 11:10 IST
<div class="paragraphs"><p>ಚಿಕ್ಕಬಳ್ಳಾಪುರ ಈಶಾ ಕೇಂದ್ರ</p></div>

ಚಿಕ್ಕಬಳ್ಳಾಪುರ ಈಶಾ ಕೇಂದ್ರ

   

ಚಿಕ್ಕಬಳ್ಳಾಪುರ: ಈಶಾ ಯೋಗ ಕೇಂದ್ರದ ಸದ್ಗುರು ಜಗ್ಗಿ ವಾಸುದೇವ್ ಅವರು ಒಂಬತ್ತು ತಿಂಗಳ ನಂತರ ತಾಲ್ಲೂಕಿನ ಆವಲಗುರ್ಕಿಯ ಈಶಾ ಯೋಗ ಕೇಂದ್ರಕ್ಕೆ ಬರುತ್ತಿದ್ದು, ಈ ಪ್ರಯುಕ್ತ ಈಶಾ ಯೋಗ ಕೇಂದ್ರದಲ್ಲಿ ಸಂಭ್ರಮ ಮನೆ ಮಾಡಿದೆ.

ರಾಜ್ಯದ ವಿವಿಧ ಕಡೆಗಳಿಂದ ಭಕ್ತರು ಅಪಾರ ಸಂಖ್ಯೆಯಲ್ಲಿ ಈಶಾ ಕೇಂದ್ರಕ್ಕೆ ಬರುತ್ತಿದ್ದಾರೆ. ಕೇಂದ್ರದ ಆವರಣ ಕಳೆಗಟ್ಟಿದೆ.

ADVERTISEMENT

ಆದಿಯೋಗಿ ಮೂರ್ತಿ, ನಾಗಮಂಟಪದ ಬಳಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದಾರೆ.

ಸದ್ಗುರು ಆಗಮನದ ಹಿನ್ನೆಲೆಯಲ್ಲಿ ಡೊಳ್ಳಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕೊಯಮತ್ತೂರಿನಿಂದ ಅವರು ಹೆಲಿಕಾಪ್ಟರ್ ಮೂಲಕ ಅವರು ಕೇಂದ್ರಕ್ಕೆ ಬರಲಿದ್ದಾರೆ.

ಕೆಲವು ತಿಂಗಳ ಹಿಂದೆ ಜಗ್ಗಿ ವಾಸುದೇವ್ ಅವರು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ನಂತರ ಯೋಗ ಕೇಂದ್ರಕ್ಕೆ ಭೇಟಿ ನೀಡಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.