ADVERTISEMENT

ಚಿಕ್ಕಬಳ್ಳಾಪುರ: ಸ್ವಾರ್ಥಕ್ಕಾಗಿ ವೈದ್ಯಕೀಯ ಕಾಲೇಜು ಸ್ಥಾಪಿಸಿಲ್ಲ -ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 6:01 IST
Last Updated 9 ಜುಲೈ 2022, 6:01 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ವಿಟಿಯು ಕ್ಯಾಂಪಸ್‌ನಲ್ಲಿ ಚಿಕ್ಕಬಳ್ಳಾಪುರ ವೈದ್ಯಕೀಯ ಶಿಕ್ಷಣ ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಧರ್ಮದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ವಿಟಿಯು ಕ್ಯಾಂಪಸ್‌ನಲ್ಲಿ ಚಿಕ್ಕಬಳ್ಳಾಪುರ ವೈದ್ಯಕೀಯ ಶಿಕ್ಷಣ ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಧರ್ಮದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು   

ಚಿಕ್ಕಬಳ್ಳಾಪುರ: ಯಾವುದೇ ಸ್ವಾರ್ಥಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಸ್ಥಾಪಿಸಿಲ್ಲ. ಸಾಮಾನ್ಯ ಜನರ ಸೇವೆಗಾಗಿ ಕಾಲೇಜು ಸ್ಥಾಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿಯ ವಿಟಿಯು ಕ್ಯಾಂಪಸ್‌ನಲ್ಲಿಚಿಕ್ಕಬಳ್ಳಾಪುರ ವೈದ್ಯಕೀಯ ಶಿಕ್ಷಣ ಕಾಲೇಜಿನ ವೈದ್ಯಕೀಯ, ನರ್ಸಿಂಗ್‌ ವಿದ್ಯಾರ್ಥಿಗಳ ಮೊದಲ ಬ್ಯಾಚ್‌ನ ಕಲಿಕೆಗೆ ಚಾಲನೆ ನೀಡಿ ಮಾತನಾಡಿದರು.

ತವರು ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ನಿರ್ಮಾಣವಾಗಬೇಕು ಎಂದು ಚಿಕ್ಕ ವಯಸ್ಸಿನಲ್ಲಿ ಕಂಡಿದ್ದ ಕನಸು ನನಸಾಗುತ್ತಿದೆ. ಜನವರಿಯಲ್ಲಿ ಕಾಲೇಜಿನ ಕಟ್ಟಡ ಉದ್ಘಾಟನೆಯಾದಾಗ ಕನಸು ಸಂಪೂರ್ಣ ಸಾಕಾರಗೊಳ್ಳಲಿದೆ ಎಂದರು.

ADVERTISEMENT

ಶಾಸಕರ ಊರಿಗೆ ಹತ್ತಿರವಿರುವುದಕ್ಕೆ ಕಾಲೇಜು ಮಾಡಿಸಿಕೊಂಡಿದ್ದಾರೆ ಎಂದು ಹೇಳುತ್ತಾರೆ. ಸ್ವಾರ್ಥಕ್ಕಾಗಿ ಈ ಜಾಗವನ್ನು ಆಯ್ಕೆ ಮಾಡಿಲ್ಲ. ಯೋಗ್ಯವಾದ ಜಾಗ ಎಂದು ನಿರ್ಧಾರ ಮಾಡಿಯೇ ಯೋಜನೆ ರೂಪಿಸಿದ್ದೇವೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹತ್ತಿರ ಹಾಗೂ ಪ್ರಯಾಣಕ್ಕೆ ಅನುಕೂಲ ಇರುವ ಪ್ರದೇಶ ಇದಾಗಿದೆ. ಆಂಧ್ರಪ್ರದೇಶ ಗಡಿ ಭಾಗದ ಜನರಿಗೂ ಇದು ಹತ್ತಿರವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್, ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿನಾರಾಯಣಪ್ಪ, ಜಿಲ್ಲಾಧಿಕಾರಿ ಆರ್.ಲತಾ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಎಂ.ಸಿದ್ದಿಕ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಾಜಾರೆಡ್ಡಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.