ADVERTISEMENT

ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಪಕ್ಷೇತರ, ಕಾಂಗ್ರೆಸ್‌ಗೆ ತಲಾ ಒಂದು ಸ್ಥಾನ

ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2023, 6:24 IST
Last Updated 30 ಡಿಸೆಂಬರ್ 2023, 6:24 IST
<div class="paragraphs"><p>ಕಾಂಗ್ರೆಸ್‌ </p></div>

ಕಾಂಗ್ರೆಸ್‌

   

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಚಿಂತಾಮಣಿ ನಗರಸಭೆಯ 18ನೇ ವಾರ್ಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಮಹಮದ್ ಶಫಿ 950 ಮತಗಳನ್ನು ಪಡೆಯುವ ಮೂಲಕ ವಿಜೇತರಾಗಿದ್ದಾರೆ. ಬಿಜೆಪಿಯ ಸೂರ್ಯನಾರಾಯಣ 255, ಜೆಡಿಎಸ್ ಅಭ್ಯರ್ಥಿ ಮುನಾವರ್ ಪಾಷ 146 ಮತಗಳನ್ನು ಪಡೆದಿದ್ದಾರೆ.

ADVERTISEMENT

ಗುಡಿಬಂಡೆ ಪಟ್ಟಣ ಪಂಚಾಯಿತಿಯ 2ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಾಜೇಶ್ 268 ಮತ ಪಡೆಯುವ ಮೂಲಕ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬುಲೆಟ್ ಶ್ರೀನಿವಾಸ್ 251, ಜೆಡಿಎಸ್‌ನ ಶ್ರೀನಿವಾಸ್ ಆರ್. ಗಾಂಧಿ 50, ಬಿಜೆಪಿಯ ಮಮತಾ ಶ್ರೀಧರ್ 18, ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತಮ್ಮ‌112 ಮತಗಳನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.