ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಅವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರೇ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಕೃಷ್ಣಪ್ಪ ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅವರ ಮೇಲೆ ಚಿರತೆ ದಾಳಿ ಮಾಡಿದೆ. ಅವರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದು ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದರು. ಪೊದೆಗಳ ನಡುವೆ ಅಡಗಿದ್ದ ಚಿರತೆ ಸೆರೆ ಹಿಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.