
ಪಿಎಸ್ಐ ಶರಣಪ್ಪ(ಎಡ),ೆಎಸ್‌ಐ ವೆಂಕಟೇಶಪ್ಪ(ಬಲ)
ಚಿಕ್ಕಬಳ್ಳಾಪುರ: ‘ಬಿ’ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಶರಣಪ್ಪ ಮತ್ತು ಎಎಸ್‌ಐ ವೆಂಕಟೇಶಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೊಟ್ಲೂರು ಗ್ರಾಮದ ರಘು ಎಂಬುವವರ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ‘ಬಿ’ ರಿಪೋರ್ಟ್ ಹಾಕಲು ₹ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ₹ 80 ಸಾವಿರ ಪಡೆಯುವಾಗ ಕನ್ನಡ ಭವನದಲ್ಲಿ ಬಳಿ ಎಎಸ್‌ಐ ವೆಂಕಟೇಶಪ್ಪ ಮತ್ತು ನಗರ ಹೊರವಲಯದ ಚಿತ್ರಾವತಿ ಬಳಿ ಶರಣಪ್ಪ ಅವರನ್ನು ವಶಕ್ಕೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಆಂಟನಿ ಜಾರ್ಚ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಗ್ರಾಮಾಂತರ ಠಾಣೆಯಲ್ಲಿ ವೆಂಕಟೇಶಪ್ಪ ಮತ್ತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.