ADVERTISEMENT

ಚಿಕ್ಕಬಳ್ಳಾಪುರ: ಅತ್ಯಾಚಾರ ಸಂತ್ರಸ್ತೆಯಿಂದ ಮಾಹಿತಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 6:14 IST
Last Updated 16 ಅಕ್ಟೋಬರ್ 2025, 6:14 IST
<div class="paragraphs"><p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಖಿ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೋಂಗ್ಡಪ್</p></div>

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಖಿ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೋಂಗ್ಡಪ್

   

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೋಂಗ್ಡಪ್ ನಗರದ ‘ಸಖಿ’ ಕೇಂದ್ರದಲ್ಲಿರುವ ಅತ್ಯಾಚಾರದ ಸಂತ್ರಸ್ತೆಯನ್ನು ಬುಧವಾರ ಭೇಟಿ ಮಾಡಿ ಮಾಹಿತಿ ಪಡೆದರು. 

ತಾಲ್ಲೂಕಿನ ಶ್ರೀನಿವಾಸ ಸಾಗರ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಬಿಡುತ್ತೇವೆ ಎಂದು ನಂಬಿಸಿ ಸಿಕಂದರ್ ಮತ್ತು ಜನಾರ್ದನಾಚಾರಿ ಎಂಬುವವರು ಅತ್ಯಾಚಾರ
ಎಸಗಿದ್ದರು.

ADVERTISEMENT

ಈ ಪ್ರಕರಣದ ಸಂತ್ರಸ್ತ ಯುವತಿಯು ಸಖಿ ಕೇಂದ್ರದಲ್ಲಿ ಇದ್ದಾರೆ. ಬುಧವಾರ ಬೆಳಿಗ್ಗೆ ಕೇಂದ್ರಕ್ಕೆ ಭೇಟಿ ನೀಡಿದ ಡೆಲಿನಾ ಖೋಂಗ್ಡಪ್ ಮತ್ತು ಅವರ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. 

‘ಡೆಲಿನಾ ಖೋಂಗ್ಡಪ್ ನೇತೃತ್ವದ ತಂಡವು ಯುವತಿಯಿಂದ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿತು. ಈ ವೇಳೆ ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಶೀಘ್ರದಲ್ಲಿಯೇ ಆಯೋಗವು ಕ್ರಮವಹಿಸಲಿದೆ’ ಎಂದು ಸಖಿ ಕೇಂದ್ರದ ಸಿಬ್ಬಂದಿ ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.

ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ರಾಜ್ಯದಾದ್ಯಂತ ಸದ್ದು ಮಾಡಿತ್ತು. ಪೊಲೀಸರು ಇಬ್ಬರು ಆರೋಪಿಗಳನ್ನು ಸಹ ಬಂಧಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.