
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕು ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಅಪರಾಧಿಗೆ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿದೆ.
ಕ್ಲಿನರ್ ಕೆಲಸ ಮಾಡುತ್ತಿದ್ದ 28 ವರ್ಷದ ಯುವಕ ಬಾಲಕಿಯನ್ನು ಅಪಹರಿಸಿ, ಬಾಲ್ಯ ವಿವಾಹ ಮಾಡಿಕೊಂಡಿದ್ದ. ಲೈಂಗಿಕ ದೌರ್ಜನ್ಯ ಎಸಗಿದ್ದ. ಚೇಳೂರು ಸಿಪಿಐ ರವಿಕುಮಾರ್ ತನಿಖೆ ನಡೆಸಿ ಚಿಕ್ಕಬಳ್ಳಾಪುರ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಲತಾ ಕುಮಾರಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಲಕ್ಷ್ಮಿನರಸಿಂಹಪ್ಪ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.