ADVERTISEMENT

ಚಿಂತಾಮಣಿ | ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 14:23 IST
Last Updated 15 ಏಪ್ರಿಲ್ 2025, 14:23 IST
ಚಿಂತಾಮಣಿ ತಾಲ್ಲೂಕಿನ ಅಂಬೇಡ್ಕರ್‌ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿಯಲ್ಲಿ ಭಾಗವಹಿಸಿದ್ದ ಗಣ್ಯರು
ಚಿಂತಾಮಣಿ ತಾಲ್ಲೂಕಿನ ಅಂಬೇಡ್ಕರ್‌ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿಯಲ್ಲಿ ಭಾಗವಹಿಸಿದ್ದ ಗಣ್ಯರು   

ಚಿಂತಾಮಣಿ: ತಾಲ್ಲೂಕಿನ ಕೈವಾರದ ಅಂಬೇಡ್ಕರ್ ಅನುದಾನಿತ ವಿದ್ಯಾಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಆಚರಣೆ ಮಾಡಲಾಯಿತು.

ಸಂಸ್ಥೆಯ ಅಧ್ಯಕ್ಷೆ ಎಸ್ಎಂ ರೋಜ ಮಾತನಾಡಿ, ಅಂಬೇಡ್ಕರ್ ಸದಾ ಪುಸ್ತಕಗಳ ಅಧ್ಯಯನ ಮಾಡುತ್ತಿದ್ದರು. ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿ ಸಂಸತ್ತಿನಲ್ಲಿ ರಾಜೀನಾಮೆ ನೀಡಿದ ಮಹಾನಾಯಕ ಎಂದು ಹೇಳಿದರು.

ಶಾಲೆಯ ಮುಖ್ಯಸ್ಥ ನಂಜಪ್ಪ ಮಾತನಾಡಿ, ಭಾರತ ರತ್ನ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಾಗಿ ನಾವೆಲ್ಲರೂ ಇಂದು ಸರಿಸಮಾನವಾಗಿ ಶಿಕ್ಷಣ ಪಡೆಯುವಂತಾಗಿದೆ. ಸಮಾನತೆ ಹಕ್ಕು ದೊರಕಿಸಿಕೊಟ್ಟ ಅಂಬೇಡ್ಕರ್ ಅವರಿಗೆ ನಾವು ಚಿರಋಣಿಯಾಗಿರಬೇಕು ಎಂದರು.

ADVERTISEMENT

ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ ಹಿರೇಮಠ ಮಾತನಾಡಿ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್‌ ಅಂಬೇಡ್ಕರ್‌ ಎರಡು ಲಕ್ಷ ಪುಸ್ತಕಗಳನ್ನು ಓದಿ ಕಂಠಪಾಠ ಮಾಡಿ ಭಾರತದ ಅತ್ಯಂತ ವಿದ್ಯಾವಂತ ವ್ಯಕ್ತಿಯಾಗಿದ್ದರು ಎಂದರು.

ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತು ಚಿತ್ರ ಬಿಡಿಸುವುದು, ಪ್ರಬಂಧ, ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಶಿಕ್ಷಕ ಸುರೇಶ ಮಕ್ಕಳಿಗೆ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ಹರೀಶ್, ದಿವ್ಯ, ವಿವೇಕ್, ಭಾಗ್ಯಮ್ಮ, ಮಂಜುಳಾ, ರವಿಕೀರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.