ADVERTISEMENT

ಚಿಂತಾಮಣಿ | ಟ್ರ್ಯಾಕ್ಟರ್ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 12:48 IST
Last Updated 19 ಸೆಪ್ಟೆಂಬರ್ 2024, 12:48 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಚಿಂತಾಮಣಿ: ಚಿಂತಾಮಣಿ-ಬೆಂಗಳೂರು ರಾಜ್ಯ ಹೆದ್ದಾರಿ ನಾಯಿಂದ್ರಹಳ್ಳಿ ಗೇಟ್‌ ಬಳಿ ಬುಧವಾರ ರಾತ್ರಿ ಬೈಕ್ ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಚಿಲಕಲನೇರ್ಪು ಹೋಬಳಿ ಯಂಡಹಳ್ಳಿ ಗ್ರಾಮದ ಆನಂದ್ (30) ಮೃತರು. ಅವರು ಕೆಂಚಾರ್ಲಹಳ್ಳಿಯಲ್ಲಿ ದ್ವಿಚಕ್ರ ವಾಹನಗಳ ರಿಪೇರಿ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಕೆಲ ಬಿಡಿಭಾಗ ಖರೀದಿಗಾಗಿ ಬೆಂಗಳೂರಿಗೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ.

ADVERTISEMENT

ನಂಬರ್ ಪ್ಲೇಟ್ ಇಲ್ಲದ ಟ್ರ್ಯಾಕ್ಟರ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ. ಯಾವುದೇ ಮುನ್ಸೂಚನೆ ನೀಡದ ಟ್ರ್ಯಾಕ್ಟರ್‌ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಬೈಕ್‌, ಟ್ರ್ಯಾಕ್ಟರ್ ಹಿಂಭಾಗದ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಸವಾರನ ತಲೆಗೆ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆನಂದ್ ಸೋದರ ಪ್ರಸಾದ್ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.