
ಪ್ರಜಾವಾಣಿ ವಾರ್ತೆಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮದ ಸರ್ಕಾರಿ ಕೆರೆಯ ಅಂಗಳದಲ್ಲಿ ಮಂಗಳವಾರ ಕಾನೂನುಬಾಹಿರವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಮೂರು ಜನರನ್ನು ಬಂಧಿಸಿದ್ದಾರೆ.
ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದ ಶ್ರೀನಿವಾಸ, ಸುರೇಶ ಸಿಂಗ್, ವಸಂತಹಳ್ಳಿ ಗ್ರಾಮದ ಜಾನಕಿರಾಮ್ ಸಿಂಗ್ ಬಂಧಿತ ಆರೋಪಿಗಳು. ಬಂಧಿತರಿಂದ ₹2,400 ಮತ್ತು 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಸಬ್ ಇನ್‌ಸ್ಪೆಕ್ಟರ್ ನಾಗೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ಶರಣಬಸವ, ನರೇಶ್, ವೆಂಕಟರಮಣ ತಂಡ ದಾಳಿ ನಡೆಸಿದರು. ಪೊಲೀಸರನ್ನು ಕಂಡಕೂಡಲೇ ಜೂಜುಕೋರರು ಪರಾರಿಯಾಗಲು ಯತ್ನಿಸಿದರು. ಆದರೆ, ಪೊಲೀಸರು ಬೆನ್ನಟ್ಟಿ ಮೂವರನ್ನು ಹಿಡಿದಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.