ಶಿಡ್ಲಘಟ್ಟ: ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೊಳಿಸಲು ಶಿಡ್ಲಘಟ್ಟದಲ್ಲಿ ಉಚಿತ ತರಬೇತಿ ಕೇಂದ್ರ ತೆರೆಯಲು ಎಬಿಡಿ ಟ್ರಸ್ಟ್ ಹಾಗೂ ಸಾಧನಾ ಐಎಎಸ್ ಕೋಚಿಂಗ್ ಸೆಂಟರ್ ಮುಂದಾಗಿದೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಎಬಿಡಿ ಟ್ರಸ್ಟ್ ಅಧ್ಯಕ್ಷ ಬಿ.ವಿ.ರಾಜೀವ್ ಗೌಡ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬೆಂಗಳೂರಿನ ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಫೆ.20ರಿಂದ ಉಚಿತ ತರಬೇತಿ ಕೇಂದ್ರ ಆರಂಭಿಸುವುದಾಗಿ ತಿಳಿಸಿದರು.
ಜನವರಿ 10ರಿಂದ ಅರ್ಜಿ ಸ್ವೀಕರಿಸಲಾಗುವುದು. ಜ.30ರವರೆಗೂ ಅರ್ಜಿ ಸಲ್ಲಿಸಬಹುದು. ನಂತರದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಫೆ.20ರಂದು ತರಬೇತಿ ಕೇಂದ್ರ ಉದ್ಘಾಟಿಸಿ ಅಂದಿನಿಂದಲೇ ಉಚಿತ ತರಬೇತಿ ಆರಂಭಿಸಲಾಗುವುದು ಎಂದು ವಿವರಿಸಿದರು.
ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ ಮಾತನಾಡಿ, ಅಂತಿಮ ವರ್ಷದ ಪದವಿ ಓದುತ್ತಿರುವ, ಪದವಿ ಮುಗಿಸಿದ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರು.
ಸಾಧನಾ ಅಕಾಡೆಮಿ ಮಹದೇವ್ ಹಾಜರಿದ್ದರು. ಮಾಹಿತಿ: 9900100616, 9008207843
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.