ADVERTISEMENT

ಪ್ರಯಾಣ, ಊಟ ತಿಂಡಿಗೆ ಪರದಾಟ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 5:38 IST
Last Updated 23 ಮಾರ್ಚ್ 2020, 5:38 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಎಂದಿನಂತೆ ಸಾರಿಗೆ ಬಸ್ ಗಳು ಸಂಚರಿಸದೆ, ಹೋಟೆಲ್‌ಗಳು ಬಾಗಿಲು ತೆರೆಯದೆ ನಗರ, ಪಟ್ಟಣ ಪ್ರದೇಶಗಳಲ್ಲಿ ಜನರು ಪ್ರಯಾಣಕ್ಕೆ, ಊಟ-ತಿಂಡಿಗಾಗಿ ಪರದಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ವರದಿಯಾದ ಬೆನ್ನಲ್ಲೇ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಮಾರ್ಚ್ 31ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಮುಖ್ಯವಾಗಿ ಸೋಮವಾರ ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆ ಬಂದ್ ಆಗಿರುವುದು ಜನಸಾಮಾನ್ಯರು ಸಂಕಷ್ಟಕ್ಕೆ ದೂಡಿದೆ. ಪರಸ್ಥಳಗಳಿಂದ ಜಿಲ್ಲೆಗೆ ದುಡಿಯಲು ಬಂದ ಕಾರ್ಮಿಕರು ಊರಿಗೆ ವಾಪಸ್ ತೆರಳಲು ಪರದಾಡುತ್ತಿದ್ದಾರೆ.

ನಗರದಲ್ಲಿ ಸೋಮವಾರ ಖಾಸಗಿ ವಾಹನಗಳ ಓಡಾಟ ಹೆಚ್ಚು ಕಂಡುಬಂತು, ಆಟೊಗಳ ಬೇಡಿಕೆ ಹೆಚ್ಚಿತ್ತು, ಕಾರ್ಮಿಕ ವರ್ಗದ ಜನರು ಕಾಲ್ನಡಿಗೆಯಲ್ಲಿಯೇ ಪ್ರಯಾಣ ಬೆಳೆಸಿದ್ದರು. ನಗರದಾದ್ಯಂತ ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದು, ಅನಗತ್ಯ ವಹಿವಾಟು, ಚಟುವಟಿಕೆಗಳಿಗೆ ಅವಕಾಶ ನೀಡುತ್ತಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.