ಚಿಕ್ಕಬಳ್ಳಾಪುರ: ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ವ್ಯಾಪಕವಾಗಿ ಮಳೆ ಸುರಿದಿದೆ.
ಕೆರೆಗಳಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉತ್ತರ ಪಿನಾಕಿನಿ ನದಿಗೆ ನೀರು ಹರಿಯುತ್ತಿದೆ.
ಚಿಕ್ಕಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದ ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ.
ಚಿಕ್ಕಬಳ್ಳಾಪುರದಿಂದ ಮಂಚನಬಲೆ ಗ್ರಾಮಕ್ಕೆ ಸಾಗುವ ರಸ್ತೆಯಲ್ಲಿರುವ ಕೆಳಸೇತುವೆ ಜಲಾವೃತವಾಗಿದೆ. ಜನರು ಪರ್ಯಾಯ ಮಾರ್ಗದಲ್ಲಿ ಓಡಾಟ ನಡೆಸಿದ್ದಾರೆ.
ಬಿಬಿ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ನಿಂತಿದೆ.ಮಂಚೇನಹಳ್ಳಿ ಕೆರೆ ಭರ್ತಿಯಾಗುವ ಹಂತಕ್ಕೆ ಬಂದಿದೆ.
ರಾಯರೇಖಲಹಳ್ಳಿಯವರೆಗೆ ಉತ್ತರ ಪಿನಾಕಿನಿ ನದಿ ಹರಿದಿದೆ. ಇಂದು ಮಳೆ ಸುರಿದರೆ ಉತ್ತರ ಪಿನಾಕಿನಿ ಗೌರಿಬಿದನೂರು ತಲುಪಲಿದೆ.
ಶಿಡ್ಲಘಟ್ಟ ತಾಲ್ಲೂಕಿನಲ್ಲಿಯೂ ಉತ್ತಮ ಮಳೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.