ADVERTISEMENT

ಶಿಡ್ಲಘಟ್ಟ | ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ತರಬೇತಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2024, 15:34 IST
Last Updated 31 ಮಾರ್ಚ್ 2024, 15:34 IST
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಮತಗಟ್ಟೆಗಳ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಭೇಟಿ ನೀಡಿದರು
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಮತಗಟ್ಟೆಗಳ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಭೇಟಿ ನೀಡಿದರು   

ಶಿಡ್ಲಘಟ್ಟ: ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಭೇಟಿ ನೀಡಿ ತರಬೇತಿ ಪಡೆಯುತ್ತಿರುವ ಮತಗಟ್ಟೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಿ.ಆರ್.ಒ ಮತ್ತು ಎ.ಪಿ.ಆರ್.ಒಗಳಿಗೆ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಪಿ.ಪಿ.ಟಿ ವಿವರಣೆ ಮೂಲಕ ವಿಷಯ ಪರಿಣಿತರು ಮಾಹಿತಿ ನೀಡಿದರೆ, ಮಧ್ಯಾಹ್ನದ ಅವಧಿಯಲ್ಲಿ ಇ.ವಿ.ಎಂ ಮೆಷಿನ್‌ ಇಟ್ಟು ಪ್ರಾತ್ಯಕ್ಷಿಕವಾಗಿ ತರಬೇತಿ ನೀಡಲಾಯಿತು.

ಸಹಾಯಕ ಚುನಾವಣಾಧಿಕಾರಿ ಜಾವಿದಾ ನಸೀಮಾ ಖಾನಂ, ಲೋಕಸಭಾ ಚುನಾವಣೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಪ್ರಥಮ ಹಂತದ ತರಬೇತಿ ನೀಡಲಾಗುತ್ತಿದೆ ಎಂದರು.

ADVERTISEMENT

ತರಬೇತಿಯಲ್ಲಿ 519 ಮಂದಿ ಪಾಲ್ಗೊಂಡಿದ್ದರು. ಇದರಲ್ಲಿ 235 ಮತಗಟ್ಟೆ ಅಧಿಕಾರಿಗಳು ಮತ್ತು 284 ಸಹಾಯಕ ಮತಗಟ್ಟೆ ಅಧಿಕಾರಿಗಳು ಇದ್ದರು.

ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಜಿ.ಮುನಿರಾಜ, ತಹಶೀಲ್ದಾರ್ ಬಿ.ಎನ್.ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.