ADVERTISEMENT

ಚಿಕ್ಕದಾಸರಹಳ್ಳಿ ಬ್ಯಾಟರಾಯ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 6:38 IST
Last Updated 4 ಮಾರ್ಚ್ 2026, 6:38 IST
ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು
ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು   

ಶಿಡ್ಲಘಟ್ಟ: ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯ ರಥೋತ್ಸವವು ಮಂಗಳವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳು ಮತ್ತು ನಗರಗಳಿಂದ ಬಂದಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡರು. 

ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು. ವಿಶೇಷ ಹೂವಿನ ಅಲಂಕಾರ ಮಾಡಿದ್ದ ರಥೋತ್ಸವದ ತೇರನ್ನು ದೇವಸ್ಥಾನದ ಸುತ್ತಲೂ ಎಳೆದ ಭಕ್ತರು ಬಾಳೆಹಣ್ಣು, ಧವನವನ್ನು ತೇರಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಕೋರಿಕೊಂಡರು. 

ರಥೋತ್ಸವಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಹಾಗು ತಹಶೀಲ್ದಾರ್ ಗಗನಸಿಂಧೂ ಚಾಲನೆ ನೀಡಿದರು.

ADVERTISEMENT

ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು.

ವಿವಿಧ ಗ್ರಾಮಗಳಿಂದ ಬಂದಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು. ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು.

ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.