ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 6,05,366 ಲಸಿಕೆ ಫಲಾನುಭವಿಗಳು

18ರಿಂದ 44 ವರ್ಷ; ಲಸಿಕೆ ಪಡೆಯಲು ನೋಂದಣಿಗೆ ಡಿಸಿ ಕರೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 14:48 IST
Last Updated 10 ಮೇ 2021, 14:48 IST
ಆರ್.ಲತಾ
ಆರ್.ಲತಾ   

ಚಿಕ್ಕಬಳ್ಳಾಪುರ: 18ರಿಂದ 44 ವರ್ಷದ ಒಳಗಿನವರು ಕೋವಿಡ್-19 ಲಸಿಕೆ ಪಡೆಯಲು ಕೋವಿನ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿರುವ ಅರ್ಹ ವಯೋ ಮಾನದವರು ನೋಂದಾಯಿ ಸಿಕೊಳ್ಳಬೇಕು. ಈ ವಯೋ ಮಾನ ದವರಿಗೆ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಪ್ರತಿ ಕೇಂದ್ರಕ್ಕೆ 150 ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಾನದ 6,05,366 ಫಲಾನುಭವಿಗಳಿಗೆ ಲಸಿಕೆ ಹಾಕಲು ‌‌ರಾಜ್ಯ ಸರ್ಕಾರ ಗುರಿ ನಿಗದಿಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂದಿನಂತೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಮಾತ್ರ ನೀಡಲು ಅವಕಾಶವಿದೆ. ಅನಿವಾರ್ಯ ಸಮಯದಲ್ಲಿ ಶೇ 10 ರಷ್ಟು 1ನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.