
ಗೌರಿಬಿದನೂರು: ಮಂಚೇನಹಳ್ಳಿ ತಾಲ್ಲೂಕಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಕಾರ್ಮಿಕ ಇಲಾಖೆಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕರ ನಿರ್ಮೂಲನ ಅಭಿಯಾನ ಶುಕ್ರವಾರ ನಡೆಯಿತು.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಪಿ ರಾಮಲಿಂಗೇ ಗೌಡ ಮಾತನಾಡಿ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದೆ. ಇದು ಸಾಮಾನ್ಯವಾಗಿ ಅವಿದ್ಯಾವಂತರಲ್ಲಿ ಹೆಚ್ಚು ಕಂಡು ಬರುತ್ತದೆ. ವಿದ್ಯಾಭ್ಯಾಸ ಮತ್ತು ಸಾಮಾಜಿಕ ತಿಳಿವಳಿಕೆಯಿಂದ ಇದನ್ನು ತಡೆಗಟ್ಟಲು ಸಾಧ್ಯ ಎಂದರು.
ಹಿರಿಯ ಶ್ರೇಣಿ ನ್ಯಾಯಾಧೀಶೆ ಗೀತಾ ಕುಂಬಾರ್ ಕೆ.ಬಿ ಮಾತನಾಡಿ, ಮಂಚೇನಹಳ್ಳಿ ತಾಲ್ಲೂಕು ಬಾಲ್ಯ ವಿವಾಹದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವುದು ಬೇಸರದ ಸಂಗತಿಯಾಗಿದೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬೆಳೆಸಿದಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕರನ್ನು ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್, ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ, ತಾಲ್ಲೂಕು ಪಂಚಾಯಿತಿ ಇಒ ಜಿ.ಕೆ ಹೊನ್ನಯ್ಯ, ಗಂಗರೆಡ್ಡಿ, ದಿನೇಶ್, ರವಿಕುಮಾರ್, ವಕೀಲ ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.