ಚಿಂತಾಮಣಿ: ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಹಳ್ಳಿ ಬಳಿ ಭಾನುವಾರ ಆಕಸ್ಮಿಕವಾಗಿ ಆಟೊ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ಕುಂದಲಹಳ್ಳಿ ಮೂಲದ ಮಮ್ತಾಜ್, ಯಾರಬ್ ಗಾಯಗೊಂಡವರು. ಆಂಧ್ರಪ್ರದೇಶದ ಬಿ ಕೊತ್ತಕೋಟೆ ಯಿಂದ ಮುರುಗಮಲ್ಲ ದರ್ಗಾಗೆ ಆಟೋದಲ್ಲಿ ಬರುತ್ತಿದ್ದಾಗ ಗುಂಡ್ಲಹಳ್ಳಿ ರಸ್ತೆಯಲ್ಲಿ ಆಟೊ ಹಳ್ಳಕ್ಕೆ ಬಿದ್ದು ತಾಯಿ ಮಗ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ಗೊತ್ತಾದ ತಕ್ಷಣ ಬಟ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.