ADVERTISEMENT

ಚಿಂತಾಮಣಿ ಬಂದ್: ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 22 ಮೇ 2025, 0:39 IST
Last Updated 22 ಮೇ 2025, 0:39 IST
   

ಚಿಂತಾಮಣಿ: ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುವುದಾಗಿ ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನಲೆಯಲ್ಲಿ ಮೇ 20 ರ ರಾತ್ರಿ 10 ಗಂಟೆಯಿಂದ 23 ರ ಬೆಳಿಗ್ಗೆ 6 ಗಂಟೆಯವರೆಗೆ ತಾಲ್ಲೂಕು ದಂಡಾಧಿಕಾರಿ ಸುದರ್ಶನ ಯಾದವ್ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಲ್ಲಿ ಅತಿ ಸೂಕ್ಷ್ಮಪ್ರದೇಶವಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸಾರ್ವಜನಿಕರ ನೆಮ್ಮದಿ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಯ ಸಲುವಾಗಿ ನಗರದ ಅಂಜನಿ ಬಡಾವಣೆ, ಎನ್.ಆರ್.ಬಡಾವಣೆ, ವಿನೋಭಾ ಕಾಲೋನಿ, ಕೆ.ಆರ್.ಬಡಾವಣೆ, ಗಜಾನನ ವೃತ್ತ, ಅಜಾದಚೌಕ, ಬೆಂಗಳೂರು ವೃತ್ತ, ತಪಥೇಶ್ವರ ಕಾಲೋನಿ ಮತ್ತು ಸರ್ಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲು ನಗರಠಾಣೆಯ ಇನ್ಸ್ ಸ್ಪೆಕ್ಟರ್ ಮನವಿ ಮಾಡಿದ್ದರು ಎಂದು ಆದೇಶದಲ್ಲಿ ತಿಳಿಸಿದೆ.

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ನಿಷೇಧಾಜ್ಞೆ ವಿಧಿಸಿ ಆದೇಶಿಸಲಾಗಿದೆ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.