ADVERTISEMENT

ಚಿಂತಾಮಣಿ| ಬೈಕ್‌ಗೆ ಕಾರು ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 5:17 IST
Last Updated 9 ಫೆಬ್ರುವರಿ 2026, 5:17 IST
ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದ ಸ್ಥಳಕ್ಕೆ ಡಿವೈಎಸ್‌ಪಿ ಮುರಳೀಧರ್, ಸಬ್ ಇನ್‌ಸ್ಪೆಕ್ಟರ್ ನಾಗಮ್ಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದ ಸ್ಥಳಕ್ಕೆ ಡಿವೈಎಸ್‌ಪಿ ಮುರಳೀಧರ್, ಸಬ್ ಇನ್‌ಸ್ಪೆಕ್ಟರ್ ನಾಗಮ್ಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.   

ಚಿಂತಾಮಣಿ: ಬೆಂಗಳೂರು-ಮದನಪಲ್ಲಿ ರಸ್ತೆಯ ಜೆ.ಕೆ.ಭವನದ ಬಳಿ ಭಾನುವಾರ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ನಾಗರಾಜ (68), ಮುಂತಕದಿರೇನಹಳ್ಳಿಯ ವೆಂಕಟರೆಡ್ಡಿ (58) ಮೃತರು.

ಬೈಕ್‌ನಲ್ಲಿ ಮದನಪಲ್ಲಿ ರಸ್ತೆ ಜೆ.ಕೆ.ಭವನದ ಬಳಿಯ ತಿರುವಿನಲ್ಲಿ ಕಟಮಾಚನಹಳ್ಳಿ ರಸ್ತೆಗೆ ಹೋಗುತ್ತಿದ್ದಾಗ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ 200 ಮೀ ದೂರ ತಳ್ಳಿಕೊಂಡು ಹೋಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ.

ADVERTISEMENT

ಗಾಯಾಳುಗಳನ್ನು ಸ್ಥಳೀಯರು ನಗರದ ಸಾರ್ವಜನಿಕರ ಆಸ್ಪತ್ರೆಗೆ ಸಾಗಿದ್ದಾರೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ. ಮಾರ್ಗ ಮಧ್ಯೆ ಗಾಯಾಳುಗಳು ಮೃತಪಟ್ಟಿದ್ದಾರೆ. ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ವಾಪಸ್ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು.

ಅಪಘಾತದಲ್ಲಿ ಬೈಕ್ ಮತ್ತು ಕಾರು ಜಖಂಗೊಂಡಿವೆ. ಕಾರಿನಲ್ಲಿದ್ದವರು ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಕಾರನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಡಿವೈಎಸ್‌ಪಿ ಮುರಳೀಧರ್, ಸಬ್ ಇನ್‌ಸ್ಪೆಕ್ಟರ್ ನಾಗಮ್ಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.