ADVERTISEMENT

ಚಿಂತಾಮಣಿ: ಕಾಣೆಯಾಗಿದ್ದ ಕನಿಶೆಟ್ಟಹಳ್ಳಿ ಗ್ರಾಮದ ಬಾಲಕನ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 2:56 IST
Last Updated 23 ಫೆಬ್ರುವರಿ 2026, 2:56 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಚಿಂತಾಮಣಿ: ತಾಲ್ಲೂಕಿನ ಕನಿಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಕಾಣೆಯಾಗಿದ್ದ ಬಾಲಕ ಕರುಣಾಕರ (3)ನ ಶವ ಮನೆಯ ಸಮೀಪಸ ಕೃಷಿ ಹೊಂಡದಲ್ಲಿ ಭಾನುವಾರ ಪತ್ತೆಯಾಗಿದೆ.

ಮನೆ ಬಳಿ ಆಟವಾಡುತ್ತಿದ್ದ ಬಾಲಕ ಶನಿವಾರ ಸಂಜೆ ಕಾಣೆಯಾಗಿದ್ದ. ಮನೆಯವರು ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಅನುಮಾನಗೊಂಡು ಭಾನುವಾರ ಅಗ್ನಿಶಾಮಕದಳಕ್ಕೆ ದೂರು ನೀಡಿ ಮನೆಯ ಸಮೀಪದಲ್ಲೇ ಇರುವ ಕೃಷಿಹೊಂಡದಲ್ಲಿ ಹುಡುಕಾಡಿಸಿದಾಗ ಬಾಲಕನ ಶವ ದೊರೆತಿದೆ. ಬಾಲಕ ಆಟವಾಡುವಾಗ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿರಬಹುದು ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.