ADVERTISEMENT

ಚಿಂತಾಮಣಿ | ನಾಳೆ ಸಾಧಕರ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2025, 14:18 IST
Last Updated 11 ಮೇ 2025, 14:18 IST

ಚಿಂತಾಮಣಿ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಮೇ 12 ರಂದು ಸಂಜೆ 6 ಗಂಟೆಗೆ ನಗರದ ಶಂಕರಮಠದ ಸಮೀಪದ ವಿವೇಕ ಜಾಗೃತ ಬಳಗದ ಭಜನಾ ಮಂದಿರದಲ್ಲಿ ಹುಣ್ಣಿಮೆಯಂದು ಸಾಧಕರ ಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ನಾಡುನುಡಿಗಾಗಿ ತಮ್ಮ ಪ್ರಾಣವನ್ನು ಮುಡುಪಾಗಿಟ್ಟ ಬಳ್ಳಾರಿಯ ಪೈಲ್ವಾನ್ ರಂಜಾನ್ ಸಾಬ್ ಕುರಿತು ಸ್ಮರಣೆ ಹಾಗೂ ಉಪನ್ಯಾಸವಿದೆ. ಪರಿಷತ್ ಪದಾಧಿಕಾರಿಗಳು, ಸದಸ್ಯರು, ಕವಿಗಳು, ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಎಲ್ಲ ಕನ್ನಡಾಭಿಮಾನಿಗಳು ಭಾಗವಹಿಸುವ ಮೂಲಕ ಕನ್ನಡ ಭಾಷಾ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು ಎಂದು ಕಸಾಪ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT