(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಚಿಂತಾಮಣಿ: ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ಯುವಕನೊಬ್ಬ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ತಿವಿದುಕೊಂಡು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕತ್ತರಿಗುಪ್ಪೆ ಗ್ರಾಮದ ನವೀನ್ (27) ಆತ್ಮಹತ್ಯೆಗೆ ಶರಣಾದವರು.
ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಮದ್ಯಸೇವನೆ ಮಾಡಿ ಮನೆಗೆ ಬಂದ ನವೀನ್ ಅವರು ಮನೆಯಲ್ಲಿದ್ದ ಚಾಕು ಮತ್ತು ಕತ್ತರಿಯಿಂದ ಹೊಟ್ಟೆಗೆ ಬಲವಾಗಿ ತಿವಿದುಕೊಂಡಿದ್ದಾರೆ. ತೀವ್ರವಾಗಿ ರಕ್ತಸ್ರಾವಗೊಂಡ ಅವರನ್ನು ಅಕ್ಕಪಕ್ಕದ ಮನೆಯವರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.
ವೈದ್ಯರು ಚಿಕಿತ್ಸೆ ನೀಡಿದರೂ ಹೆಚ್ಚಿನ ರಕ್ತಸ್ರಾವದಿಂದಾಗಿ ನವೀನ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.