
ಚಿಂತಾಮಣಿ: ನಗರಸಭೆ ಚುನಾಯಿತ ಪ್ರತಿನಿಧಿಗಳ ಅವಧಿ ನವೆಂಬರ್ 1ಕ್ಕೆ ಮುಕ್ತಾಯವಾಗಿದ್ದರೂ, ಹಿಂದಿನಂತೆ ನಗರದ ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ಮನವಿ ಮಾಡಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ಸಲಹೆ, ಸೂಚನೆಯಂತೆ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಜತೆ ಜತೆಯಲ್ಲಿ ಕಾಲ ಕಾಲಕ್ಕೆ ಬರುವ ಸುತ್ತೋಲೆಯಂತೆ ಕೆಲಸ ಮಾಡುತ್ತಿದ್ದೆವು. ನಗರದಲ್ಲಿ 3 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲು ಸಚಿವರು ಸೂಚಿಸಿದ್ದಾರೆ. ಕೆಲವು ವಾರ್ಡ್‌ಗಳಲ್ಲಿ ಪೂರೈಕೆ ಮಾಡಲಾಗುತ್ತಿದೆ. ಉಳಿದ ವಾರ್ಡ್‌ಗಳಲ್ಲೂ ಪೈಪ್ ಸಂಪರ್ಕ ಕಾಮಗಾರಿ ನಡೆಯುತ್ತಿವೆ ಎಂದು ತಿಳಿಸಿದರು.
ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯಬಾರದು ಎಂದು ಜಾಗೃತಿ ಮೂಡಿಸಲಾಗಿದೆ. ಕಸ ಸುರಿಯುವವರಿಗೆ ದಂಡ ವಿಧಿಸಲಾಗಿದೆ. ಕೆಲವರ ಮನೆ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಲಾಗಿದೆ. ವಾರ್ಡ್‌ಗೆ ಒಂದೊಂದು ವಾಹನ ಒದಗಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ. ಇನ್ನೂ ಕೆಲವು ಕಡೆ ಅಳವಡಿಸಲಾಗುತ್ತದೆ. ಕಸ ಮತ್ತು ಬೀದಿದೀಪ ಕೊರತೆ ಕಂಡು ಬಂದರೆ 9844162527, 9739346460, 9632932831 ಸಂಪರ್ಕಿಸಬಹುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.