
ಚಿಂತಾಮಣಿ: ನಗರದ ಕೀರ್ತಿ ನಗರ ಬಡಾವಣೆ ಮನೆಯೊಂದರಲ್ಲಿ ಸಕ್ರಿಯವಾಗಿದ್ದ ಅಕ್ರಮ ಗಾಂಜಾ ಮಾರಾಟ ಜಾಲವನ್ನು ಪೊಲೀಸರು ಶುಕ್ರವಾರ ರಾತ್ರಿ ಭೇದಿಸಿದ್ದಾರೆ.
ಗಾಂಜಾ ಮಾರಾಟ ಮಾಡಿದ ಆರೋಪದ ಮೇರೆಗೆ ಶಬಾನ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಅವರ ಬಳಿ ಇದ್ದ 2 ಕೆ.ಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಪ್ಲಾಸ್ಟಿಕ್‌ನಲ್ಲಿ ಪ್ಯಾಕ್ ಮಾಡಿದ್ದ ಗಾಂಜಾ ಪಾಕೆಟ್‌ಗಳನ್ನು ಚೀಲಗಳಲ್ಲಿ ಬಚ್ಚಿಡಲಾಗಿತ್ತು. ಒಟ್ಟಾರೆ 2.4 ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ರಮವಾಗಿ ಶ್ರೀಂಗಧ ಮತ್ತು ಗಾಂಜಾ ಮಾರಾಟ ಪ್ರಕರಣದಲ್ಲಿ ಶಬಾನ ಕುಟುಂಬಸ್ಥರು ಹಲವು ಬಾರಿ ಬಂಧಿತರಾಗಿದ್ದರು. ಜೊತೆಗೆ ಜಿಲ್ಲೆಯಿಂದಲೂ ಗಡೀಪಾರಾಗಿದ್ದರು. ಜೈಲಿನಿಂದ ವಾಪಸ್ ಬರುತ್ತಲೇ ಮತ್ತೆ ತಮ್ಮ ಚಾಳಿ ಮುಂದುವರೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಚಿಂತಾಮಣಿ ಉಪ ವಿಭಾಗದ ಡಿವೈಎಸ್‌ಪಿ ಮುರುಳೀಧರ್, ನಗರ ಠಾಣೆ ಇನ್‌ಸ್ಪೆಕ್ಟರ್ ವಿಜಿಕುಮಾರ್, ಪಿಎಸ್‌ಐಗಳಾದ ರಮೇಶ್, ಪದ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.