ADVERTISEMENT

ಚಿಂತಾಮಣಿಯಲ್ಲಿ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 4:55 IST
Last Updated 11 ಆಗಸ್ಟ್ 2025, 4:55 IST
ಚಿಂತಾಮಣಿಯಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಉದ್ಘಾಟಿಸಿದರು
ಚಿಂತಾಮಣಿಯಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಉದ್ಘಾಟಿಸಿದರು   

ಚಿಂತಾಮಣಿ: ನಗರದ ಪ್ರಗತಿ ಕಾಲೇಜಿನಲ್ಲಿ ಮಾಜಿ ಶಾಸಕ. ಜೆ.ಕೆ. ಕೃಷ್ಣರೆಡ್ಡಿ ಅವರು ಶನಿವಾರ ಉದ್ಯೋಗ ಮೇಳ ಆಯೋಜಿಸಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಪ್ರೀಂ ಕೋ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಕಳೆದ ಎರಡು ವರ್ಷಗಳಿಂದ ಉನ್ನತ ಶಿಕ್ಷಣ ಸಚಿವರಾಗಿರುವ ತಮ್ಮ ಕೊಡುಗೆ ಏನು ಎಂಬುದನ್ನು ಯುವಕರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. 

ADVERTISEMENT

‘ಪಾಳಿಗಾರಿಕೆ ಆಡಳಿತವನ್ನು ಜನರು ಸಹಿಸುತ್ತಾರೆ ಎಂದು ತಿಳಿದುಕೊಂಡಿದ್ದರೆ, ಅದು ನಿಮ್ಮ ಭ್ರಮೆಯಾಗಲಿದ್ದು, ಮುಂದಿನ ದಿನಗಳಲ್ಲಿ ಜನರು ನಿಮಗೆ ತಕ್ಕ ಶಾಸ್ತಿ ಮಾಡಲಿದ್ದಾರೆ’ ಎಂದರು. 

ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಪದವೀಧರ ನಿರುದ್ಯೋಗಿ ಯುವಕ, ಯುವತಿಯರಿಗೆ ಒಂದೇ ಸೂರಿನಲ್ಲಿ ಉದ್ಯೋಗ ಕಲ್ಪಿಸಲು ಮೇಳ ಆಯೋಜಿಸಲಾಗಿದೆ ಎಂದರು. 

ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ಬಿಜೆಪಿಯ ಜಿ.ಎನ್. ವೇಣುಗೋಪಾಲ್, ಜೆಡಿಎಸ್‌ ಮುಖಂಡ ಬೈರಾರೆಡ್ಡಿ, ಉದ್ಯೋಗ ಮೇಳದ ಆಯೋಜಕ ಸುರೇಂದ್ರರೆಡ್ಡಿ, ಪ್ರಗತಿ ಕಾಲೇಜಿನ ಮುಖ್ಯಸ್ಥ ಜೆ.ವಿ ನಾರಾಯಣಸ್ವಾಮಿ ಭಾಗವಹಿಸಿದ್ದರು.

ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿರುವ ಯವಕರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂಬ ಸದ್ದುದ್ದೇಶದಿಂದ ಮಾಜಿ ಶಾಸಕ ಎಂ. ಕೃಷ್ಣಾರೆಡ್ದಿ ಉದ್ಯೋಗಮೇಳವನ್ನು ಹಮ್ಮಿಕೊಂಡು ಸಾವಿರಾರು ಜನ ಯುವಕರಿಗೆ ಉದ್ಯೋಗ ಕೋಡಿಸಲು ಮುಂದಾಗಿರುವುದು ಶ್ಲಾಘನೀಯವಾಗಿದೆ. ಉನ್ನತ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಡಾ.ಎಂ.ಸಿ ಸುಧಾಕರ್ ರವರು ಉದ್ಯೋಗಮೇಳದ ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು ಅದನ್ನು ತುಂಬಲು ಯಾಕೆ ಕ್ರಮಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಪಡೆದು ಸಾರ್ವಜನಿಕರಿಗೆ ಸಂವಿಧಾನದ ಅಡಿಯಲ್ಲಿ ಜನರ ಆಡಳಿತವನ್ನು ನೀಡಬೇಕು, ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗಬೇಕು ಹಾಗೂ ಆರ್ಥಿಕ ಸ್ವಾವಲಂಬನೆಯನ್ನು ಜನರಿಗೆ ತುಂಬಿಸುವುದು ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.