(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಚಿಂತಾಮಣಿ: ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರು ಕಲ್ಲಹಳ್ಳಿ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ಮೃತರ ಸಂಬಂಧಿಕರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಲ್ಲಹಳ್ಳಿ ಗ್ರಾಮದ ನಿವಾಸಿ ಮುನಿಲಕ್ಷ್ಮಮ್ಮ(70) ಮೃತಪಟ್ಟವರು. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧೆ ಮುನಿಲಕ್ಷ್ಮಮ್ಮ ಅವರಿಗಾಗಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರು. ಅಂತಿಮವಾಗಿ ಸೋಮವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ, ಅಷ್ಟರಲ್ಲಾಗಲೇ ಗ್ರಾಮದ ದೊಡ್ಡ ಕೆರೆಯಲ್ಲಿ ವೃದ್ಧೆಯ ಶವ ತೇಲುತ್ತಿರುವುದು ಕಂಡುಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಮತ್ತು ನಗರ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಡಿವೈಎಸ್‌ಪಿ ಮುರಳೀಧರ್ ಪರಿಶೀಲನೆ ನಡೆಸಿದರು. ಸುಮಾರು 20 ಆಳದ ಕೆರೆಯಲ್ಲಿ ಮುನಿಲಕ್ಷ್ಮಮ್ಮ ಅವರ ಶವ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದೊಂದು ಆಕಸ್ಮಿಕ ದುರಂತವೇ ಅಥವಾ ಇದರ ಹಿಂದೆ ಯಾರದ್ದಾದರೂ ಕೈವಾಡವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.