ADVERTISEMENT

ಕೆಪಿಸಿಸಿಯಿಂದ ಸಾರ್ವಜನಿಕ ಸಭೆ ಫೆ. 23ಕ್ಕೆ: ಸಚಿವ ಡಾ.ಎಂ.ಸಿ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 5:46 IST
Last Updated 19 ಫೆಬ್ರುವರಿ 2026, 5:46 IST
ಚಿಂತಾಮಣಿಯಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು
ಚಿಂತಾಮಣಿಯಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು   

ಚಿಂತಾಮಣಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ, ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ, ಸ್ಪಷ್ಟತೆ ಇಲ್ಲದ ಕಾಯ್ದೆ ಜಾರಿಗೆ ಮುಂದಾಗಿರುವುದನ್ನು ಖಂಡಿಸಿ ಇದೇ 23ರಂದು ಕೆಪಿಸಿಸಿ ವತಿಯಿಂದ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. 

ನಗರದ ಅಂಜನಿ ನಿವಾಸದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಳಗೊಂಡ ಬೃಹತ್ ಸಾರ್ವಜನಿಕ ಸಭೆ ಇದಾಗಿದೆ. ಮೂರು ಜಿಲ್ಲೆಗಳ ಎಲ್ಲ ತಾಲ್ಲೂಕುಗಳ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುತ್ತಾರೆ. ಕೇಂದ್ರ ಸರ್ಕಾರವು ಮತದಾರರ ಪಟ್ಟಿ ಪರಿಷ್ಕರಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸುತ್ತಿದೆ. 2002ರಲ್ಲಿದ್ದ ಮತದಾರರ ಪಟ್ಟಿಯ ಮ್ಯಾಪಿಂಗ್ ಮಾಡಲಿದ್ದು, ಹೊಸದಾಗಿ ಸೇರ್ಪಡೆಯಾದವರನ್ನು ತೆಗೆದುಹಾಕಲಾಗುತ್ತಿದೆ ಎಂದು ದೂರಿದರು. 

ADVERTISEMENT

ಹಿಂದಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದ ಬೂತ್ ಹಂತದ ಏಜೆಂಟರು ಎಚ್ಚೆತ್ತುಕೊಳ್ಳಬೇಕು. ಅರ್ಹ ಮತದಾರರನ್ನು ಕೈಬಿಡದಂತೆ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ತರಲಾಗುತ್ತಿದೆ. ಇದರ ಜನವಿರೋಧಿ ನೀತಿಗಳ ಕುರಿತು ಜನಜಾಗೃತಿ ಮೂಡಿಸಬೇಕಿದೆ. ಅನುದಾನ ಕಡಿತಗೊಳಿಸಲಾಗಿದೆ. ವಿವಿಧ ನಿರ್ಬಂಧ ಹೇರಲಾಗಿದೆ. ರಾಜ್ಯ ಸರ್ಕಾರಗಳ ಮೇಲೆ ಹೊರೆ ಹಾಕಲಾಗಿದೆ ಎಂದರು. 

ಮನರೇಗಾಕ್ಕೆ ರಾಜ್ಯ ಸರ್ಕಾರವು ಶೇ 10ರಷ್ಟು ಮತ್ತು ಕೇಂದ್ರದಿಂದ ಶೇ 90ರಷ್ಟು ಅನುದಾನ ನೀಡುತ್ತಿದ್ದವು. ಆದರೆ, ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ರಾಜ್ಯಗಳೇ ಶೇ 40ರಷ್ಟು ಪಾಲು ನೀಡಬೇಕು. ಇದರಿಂದ ರಾಜ್ಯಗಳ ಮೇಲೆ ಆರ್ಥಿಕ ಹೊರೆಯಾಗಲಿದೆ ಎಂದರು.