ADVERTISEMENT

ಚಿಂತಾಮಣಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 7:44 IST
Last Updated 31 ಆಗಸ್ಟ್ 2025, 7:44 IST
   

ಚಿಂತಾಮಣಿ: ಚಿಂತಾಮಣಿ–ಬೆಂಗಳೂರು ಮಾರ್ಗದ ರಸ್ತೆಯ ವೈಜಕೂರು ಬಳಿ ಶನಿವಾರ ರಾತ್ರಿ ಕೆಎಸ್ಆರ್‌ಟಿಸಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು,  ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ಹಿಂಬದಿ ಸವಾರ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಕೊಲಂಬಸ್ (25) ಮೃತಪಟ್ಟ ಯುವಕ. ಈ ಅಪಘಾತದಲ್ಲಿ  ಬೈಕ್ ಸವಾರ ಬೈಕ್ ಸವಾರ ಮಾಗಡಿ ಸಮೀಪದ ತಾವರೆಕೆರೆ ಭರತೇಶ್‌ಗೆ ಕೈ ಮತ್ತು ಕಾಲು ಮುರಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ. ಆತನಿಗೆ ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಯಿತು. 

ಚಿಂತಾಮಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಬೆಂಗಳೂರು ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೊಲಂಬಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಸಂಪೂರ್ಣ ಜಖಂಗೊಂಡಿದೆ. 

ADVERTISEMENT

ಬಸ್ ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.