ಚಿಂತಾಮಣಿ: ತಾಲ್ಲೂಕಿನ ಚೇಳೂರು ರಸ್ತೆಯ ಚೊಕ್ಕರೆಡ್ಡಿಹಳ್ಳಿಯ ಕೆರೆಯ ಕಟ್ಟೆ ಬಳಿ ಭಾನುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ರಸ್ತೆಯಲ್ಲಿ ಓಡಾಡುವ ಜನರಿಗೆ ದುರ್ನಾತ ಬರುತ್ತಿರುವುದನ್ನು ಗಮನಿಸಿ ವಾಸನೆಯ ಜಾಡು ಹಿಡಿದು ಸ್ಥಳಕ್ಕೆ ಹೋದಾಗ ಸುಮಾರು 45 ವರ್ಷದ ವ್ಯಕ್ತಿಯ ದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಜನರಿಂದ ಜನರಿಗೆ ಸುದ್ದಿ ಹರಡಿ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಗ್ರಾಮಾಂತರ ಠಾಣೆಯ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು 45 ವರ್ಷದ ಕಟ್ಟುಮಸ್ತಾದ ವ್ಯಕ್ತಿ. ಮೆರೂನ್ ಬಣ್ಣದ ಪ್ಯಾಂಟ್ ಮತ್ತು ಬಿಳಿ ಬಣ್ಣದ ಬನಿಯನ್ ಧರಿಸಿದ್ದಾರೆ. ಗ್ರಾಮಾಂತರ ಠಾಣೆಯ ಪ್ರಭಾರ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.