ADVERTISEMENT

ಚಿಂತಾಮಣಿ | ಕೃಷಿ ಹೊಂಡಕ್ಕೆ ಬಿದ್ದು ಅರೆಕಾಲಿಕ ಉಪನ್ಯಾಸಕ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2025, 15:37 IST
Last Updated 25 ಮೇ 2025, 15:37 IST
ಶಂಕರರೆಡ್ಡಿ
ಶಂಕರರೆಡ್ಡಿ   

ಚಿಂತಾಮಣಿ: ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಂಗಿಮಾಳು ಗ್ರಾಮದಲ್ಲಿ ಶನಿವಾರ ಅರೆಕಾಲಿಕ ಉಪನ್ಯಾಸಕರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಮೃತರನ್ನು ಗ್ರಾಮದ ನಿವಾಸಿ ಶಂಕರರೆಡ್ಡಿ (38) ಎಂದು ಗುರುತಿಸಲಾಗಿದೆ.

ಶಂಕರರೆಡ್ಡಿ ಬಾಗೇಪಲ್ಲಿಯ ನ್ಯಾಷನಲ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅವರ ವಿವಾಹದ ದಿನಾಂಕ ನಿಶ್ಚಯವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದರು.

ADVERTISEMENT

ಶನಿವಾರ ಸಂಜೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.