
ಪ್ರಾತಿನಿಧಿಕ ಚಿತ್ರ
ಚಿಂತಾಮಣಿ: ತಾಲ್ಲೂಕಿನ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಎಂಬ ಮಾಧ್ಯಮ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜೊತೆಗೆ ಈ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿನಿಯ ದೈಹಿಕ ಬೆಳವಣಿಗೆ ಕಂಡು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿಯು 5 ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು. ಬಾಲಕಿ ದಸರಾ ರಜೆಗೆಂದು ಊರಿಗೆ ಹೋಗಿದ್ದಾಗ ಆಕೆಯ ಸೋದರ ಮಾವನಿಂದಲೇ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಕುರಿತು ಶಾಲೆಗೆ ಸಂಬಂಧಿಸಿದ ಅಧಿಕಾರಿಗಳು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.
ಈ ಕೃತ್ಯವೆಸಗಿದ ಆರೋಪಿ ಶೋಧಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸಂತ್ರಸ್ತ ಬಾಲಕಿಗೆ ಇಲಾಖೆಯಿಂದ ಒದಗಿಸಲಾದ ಸೌಲಭ್ಯ, ಸಂತ್ರಸ್ತ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆಯೇ ಹಾಗೂ ದೂರು ದಾಖಲಾದ ಪ್ರಕರಣದ ಕುರಿತು ಎಫ್ಐಆರ್ ಪ್ರತಿ ಕಳುಹಿಸಿಕೊಡುವಂತೆ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.