
ಚಿಂತಾಮಣಿ: ನಗರದ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಕ್ರೀಡಾಂಗಣದಲ್ಲಿ ₹9.25 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಕ್ರೀಡಾಪಟುಗಳು ಮತ್ತು ವಾಯುವಿಹಾರಿಗಳಿಗೆ ಕ್ರೀಡಾಂಗಣ ಪ್ರವೇಶವನ್ನು ನಿಷೇಧಿಸಲಾಗಿದೆ.
ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ದೂರದೃಷ್ಟಿ ಮತ್ತು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇದು ಒಂದಾಗಿದ್ದು, ಅಂತರರಾಷ್ಟೀಯ ಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.
ಈ ಯೋಜನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ₹9 ಕೋಟಿ ಹಾಗೂ ಕ್ರೀಡಾಂಗಣ ಸಮಿತಿಯಿಂದ ₹25 ಲಕ್ಷ ಭರಿಸಲಿವೆ.
ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ, ಬಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಸ್ಕೇಟಿಂಗ್ ಅಂಕಣ, ವೀಕ್ಷಕರಿಗೆ ಕುಳಿತುಕೊಳ್ಳಲು ಸುತ್ತಲೂ ಆಸನಗಳ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಝಾನ್ಸಿ ಮೈದಾನದಲ್ಲಿ ನಡೆಯುತ್ತಿವೆ.
ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ತಾಲ್ಲೂಕಿನ ಕ್ರೀಡಾಪಟುಗಳ ಸಿಂಥೆಟಿಕ್ ಟ್ರ್ಯಾಕ್ ಇಲ್ಲ ಎಂಬ ಕೊರಗು ನಿವಾರಣೆ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸರಿಸಮವಾಗಿ ತಾಲ್ಲೂಕಿನ ಕ್ರೀಡಾಪಟುಗಳು ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಕ್ರೀಡಾ ತರಬೇತಿ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.