ಯೋಗ ದಿನಾಚರಣೆ
ಚಿಂತಾಮಣಿ: ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಜೂನ್ 21ರಂದು ನಡೆಯಲಿರುವ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಆಚರಿಸಬೇಕು ಎಂದು ಸೂಚಿಸಲಾಗಿದೆ.
ಪ್ರಾಣಾಯಾಮ, ಧ್ಯಾನ ಮತ್ತಿತರ ಮನೋಬಲ ಹೆಚ್ಚಿಸುವ ಚಟುವಟಿಕೆಗಳು, ದೇಶಭಕ್ತಿ ಗೀತೆಗಳನ್ನು ಬಳಸಿ ಲಯಬದ್ಧ ಯೋಗಾಸನಗಳನ್ನು ಮಾಡಿಸಬೇಕು. ಅದರ ಫೋಟೊಗಳನ್ನು ಯೋಗ ಮೊಬೈಲ್ ಆ್ಯಪ್‌ನಲ್ಲಿ ಅಪ್ಲೋಡ್ ಮಾಡಬೇಕು. ನಿತ್ಯ ಮಾಡಬಹುದಾದ ಸರಳ ಯೋಗ ವ್ಯಾಯಾಮ ಮಾಡುವುದನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಜೀವನ ಶೈಲಿಯಲ್ಲಿ ಅಳವಡಿಸಿಕೊಳ್ಳಬೇಕು. ಚೆಸ್, ಸುಡೊಕೊ, ಒಗಟುಗಳು ಮತ್ತಿತರ ಮಾನಸಿಕ ಆಟಗಳನ್ನು ಆಡಿಸಬೇಕು ಎಂದು ಸೂಚಿಸಲಾಗಿದೆ.
ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.