ADVERTISEMENT

ಜಲ ಮೂಲ ಸಂರಕ್ಷಣೆ ನಮ್ಮ ಕರ್ತವ್ಯ: ಇಂದಿರಾ ಕೃಷ್ಣಪ್ಪ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 13:06 IST
Last Updated 16 ಡಿಸೆಂಬರ್ 2023, 13:06 IST
ಶಿಡ್ಲಘಟ್ಟ ತಾಲ್ಲೂಕಿನ ಎಸ್. ದೇವಗನಹಳ್ಳಿ ಗ್ರಾಮದಲ್ಲಿನ ಗಂಗಮ್ಮ ಕಲ್ಯಾಣಿಯನ್ನು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ಎಸ್. ದೇವಗನಹಳ್ಳಿ ಗ್ರಾಮದಲ್ಲಿನ ಗಂಗಮ್ಮ ಕಲ್ಯಾಣಿಯನ್ನು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು   

ಶಿಡ್ಲಘಟ್ಟ: ಪುರಾತನ ಕಾಲದ ಜಲ ಮೂಲಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಹೇಳಿದರು.

ತಾಲ್ಲೂಕಿನ ಎಸ್. ದೇವಗನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಭವನ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಕೋಶ, ಯುವ ಸಬಲೀಕರಣ ಇಲಾಖೆ ಮತ್ತು ಯಲಹಂಕ ಉಪನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ, ಗಾಂಧಿ ಅಧ್ಯಯನ ಕೇಂದ್ರದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಶಿಬಿರದಲ್ಲಿ ಮಾತನಾಡಿದರು.

ನಮ್ಮ ಪೂರ್ವಜರು ಜಲಮೂಲಗಳ ಶೇಖರಣೆಗಾಗಿ ದೇವಸ್ಥಾನಗಳ ಬಳಿ ಸುಮಾರು ವರ್ಷಗಳ ಹಿಂದೆ ಬಾವಿ ಮತ್ತು ಕಲ್ಯಾಣಿ ನಿರ್ಮಾಣ ಮಾಡಿದ್ದು, ಅಂತಹ ಕಲ್ಯಾಣಿಗಳು ಗಿಡ ತುಂಬಿಕೊಂಡು ನಾಶವಾಗುತ್ತಿವೆ. ಸ್ವಚ್ಛತಾ ಶಿಬಿರಗಳ ಮೂಲಕ ಎನ್‌ಎಸ್‌ಎಸ್ ಸ್ವಯಂಸೇವಕರ ಸಹಕಾರದಿಂದ ಕಲ್ಯಾಣಿಗಳಿಗೆ ಮರುಜೀವ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ADVERTISEMENT

ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಕೆ.ಎಸ್.ನವೀನ್ ಕುಮಾರ್ ಮಾತನಾಡಿ, 60 ಸ್ವಯಂಸೇವಕರ ತಂಡದೊಂದಿಗೆ ದೇವಗಾನಹಳ್ಳಿ ಗ್ರಾಮದ ಪಾಳು ಬಿದ್ದಿದ್ದ ಗಂಗಮ್ಮ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ ಮರುಜೀವ ನೀಡಿದ್ದೇವೆ. ಇದೇ ರೀತಿ ಸಾದಲಿ ಗ್ರಾಮದ ಸಾದಲಮ್ಮ ದೇವಾಲಯದ ಆವರಣದಲ್ಲಿರುವ ಕಲ್ಯಾಣಿಯ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.