ADVERTISEMENT

ಸಿ.ಎಂ ಭೇಟಿ: ತಾಲ್ಲೂಕು ಆಡಳಿತ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 6:33 IST
Last Updated 21 ನವೆಂಬರ್ 2025, 6:33 IST
ತಹಶೀಲ್ದಾರ್ ಗಗನಸಿಂಧು
ತಹಶೀಲ್ದಾರ್ ಗಗನಸಿಂಧು   

ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಸುಮಾರು ₹680 ಕೋಟಿ ಸೇರಿದಂತೆ ಜಿಲ್ಲೆಯಲ್ಲಿ ಸುಮಾರು ₹1,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 24ರಂದು ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜನಸಾಮಾನ್ಯರು ಭಾಗವಹಿಸಬೇಕು ಎಂದು ತಹಶೀಲ್ದಾರ್ ಗಗನಸಿಂಧೂ ಮನವಿ ಮಾಡಿದರು. 

ನಗರದ ತಾಲ್ಲೂಕು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ನಗರದ ಹೊರವಲಯದ ವರದನಾಯಕಹಳ್ಳಿ ಬಳಿ ಜಿಲ್ಲಾ ವ್ಯಾಪ್ತಿಯ ವಿವಿಧ ಕಾಮಗಾರಿಗಳು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. 

ADVERTISEMENT

ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವವರಿಗೆ ಊಟ, ಕುಡಿಯುವ ನೀರು, ಆರೋಗ್ಯ ಸೇವೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.