
ಚಿಕ್ಕಬಳ್ಳಾಪುರದಲ್ಲಿ ನಡೆದ ಸಭೆಯಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.24ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಜಿಲ್ಲಾಡಳಿತ ಭವನದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ‘ಮುಖ್ಯಮಂತ್ರಿ ಪ್ರವಾಸ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ
ನಡೆಯಿತು.
ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಶಿಡ್ಲಘಟ್ಟದಲ್ಲಿ ₹1,700 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ ನೀಡುವರು. ಮುಖ್ಯವಾಗಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ₹200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು’ ಎಂದು
ಹೇಳಿದರು.
ತಾಲ್ಲೂಕುವಾರು ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಉದ್ಘಾಟನೆ ಮತ್ತಿತರ ವಿಚಾರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು.
ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.