
ಶಿಡ್ಲಘಟ್ಟ: ಜಿಲ್ಲೆಯಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಭೂಮಿಪೂಜೆ ಮತ್ತು ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ನವೆಂಬರ್ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಸೇರಿದಂತೆ ಇತರ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ತಾಲ್ಲೂಕಿನ ಹನುಮಂತಪುರ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಕಾರ್ಯಕ್ರಮದ ವೇದಿಕೆ ಸಿದ್ಧತೆಗಳನ್ನು ವೀಕ್ಷಿಸಿ ಮಾತನಾಡಿದರು.
ಸುಮಾರು ₹2000 ಕೋಟಿಯ ವಿವಿಧ ಕಾಮಗಾರಿಗಳ ಚಾಲನೆಗೆ ಮುಖ್ಯಮಂತ್ರಿ ಆಗಮಿಸುತ್ತಿದ್ದಾರೆ. ಜಿಲ್ಲೆಯ ಮೂಲೆಮೂಲೆಯಿಂದ ಸಾವಿರಾರು ಜನ ಆಗಮಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಬರುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಗಾಳಿ, ಬೆಳಕು, ಎಲ್.ಇ.ಡಿ ಪರದೆಗಳಲ್ಲಿ ವೇದಿಕೆ ಕಾರ್ಯಕ್ರಮದ ವೀಕ್ಷಣೆಯ ವ್ಯವಸ್ಥೆ ಸೇರಿದಂತೆ ಭೋಜನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಕಾರದಿಂದ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.