ADVERTISEMENT

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಾಗರಹಾವು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 4:29 IST
Last Updated 28 ಆಗಸ್ಟ್ 2022, 4:29 IST
ಚಿಕ್ಕಬಳ್ಳಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಹಾವನ್ನು ಪೃಥ್ವಿರಾಜ್ ಹಿಡಿದ ಕ್ಷಣ
ಚಿಕ್ಕಬಳ್ಳಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಹಾವನ್ನು ಪೃಥ್ವಿರಾಜ್ ಹಿಡಿದ ಕ್ಷಣ   

ಚಿಕ್ಕಬಳ್ಳಾಪುರ: ನಗರದಿಂದ ಶಿಡ್ಲಘಟ್ಟಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶನಿವಾರ ನಾಗರಹಾವು ಪ್ರತ್ಯಕ್ಷವಾಗಿದೆ. ಇದರಿಂದ ಪ್ರಯಾಣಿಕರು ಬಸ್‌ನಿಂದ ದಡದಡನೆ ಇಳಿದ ಪ್ರಸಂಗ ನಗರದಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಬಸ್ ಶಿಡ್ಲಘಟ್ಟ ವೃತ್ತಕ್ಕೆ ಬಂದಿದೆ. ಈ ವೇಳೆ ಬಸ್‌ನಲ್ಲಿ ಹಾವು ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಹಾವು ಹಾವು ಎಂದು ಕಿರುಚಿದ್ದಾರೆ. ಚಾಲಕ ಮತ್ತು ನಿರ್ವಾಹಕ ತಕ್ಷಣ ಬಸ್ ನಿಲುಗಡೆ ಮಾಡಿದ್ದಾರೆ.

ಉಗರತಜ್ಞ ಪೃಥ್ವಿರಾಜ್ ಸ್ಥಳಕ್ಕೆ ಬಂದು ಬಸ್‌ನಲ್ಲಿ ಹಾವಿಗಾಗಿ ಹುಡುಕಾಟ ನಡೆಸಿದ್ದಾರೆ. ಇಡೀ ಬಸ್ ಜಾಲಾಡಿದರೂ ಹಾವು ಪತ್ತೆಯಾಗಲು ಬಹಳ ಸಮಯಬೇಕಾಯಿತು. ಹಾವು ಎಂಜಿನ್ ಮುಂಭಾಗದಲ್ಲಿ ಪತ್ತೆಯಾಗಿದೆ. ಪೃಥ್ವಿರಾಜ್ ಹಾವು ಹಿಡಿದಿದ್ದಾರೆ. ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹೀಗೆ ಹಾವು ಹಿಡಿಯುವುದನ್ನು ನೋಡಲು ಜನರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.