ADVERTISEMENT

ವಿದ್ಯಾರ್ಥಿ ನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಪೆದ್ದಪ್ಪಯ್ಯ ಭೇಟಿ

ನಿಲಯಗಳಲ್ಲೇ ವಾಸ್ತವ್ಯ ಹೂಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವ್ಯವಸ್ಥೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 13:16 IST
Last Updated 17 ಸೆಪ್ಟೆಂಬರ್ 2019, 13:16 IST
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳೊಂದಿಗೆ ವಿವಿಧ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳೊಂದಿಗೆ ವಿವಿಧ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ   

ಚಿಕ್ಕಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ ಅವರು ಇತ್ತೀಚೆಗೆ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಭೇಡಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ ನಗರ ಮತ್ತು ಬಾಗೇಪಲ್ಲಿ ತಾಲ್ಲೂಕಿನ ನಲ್ಲಗುಟ್ಟಪಲ್ಲಿ ಗ್ರಾಮದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ ಪೆದ್ದಪ್ಪಯ್ಯ ಅವರು ಅಲ್ಲಿಯೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿ ಪರಿಸ್ಥಿತಿ ಅವಲೋಕಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ನಿಲಯಗಳ ಮೂಲಸೌಕರ್ಯ, ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಜತೆಗೆ ಇಲಾಖೆಯ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ನಿಲಯಗಳಲ್ಲಿಯೇ ಊಟ, ಉಪಾಹಾರ ಸೇವಿಸಿದರು. ಇದೇ ವೇಳೆ ಅವರು ನಿಲಯಗಳ ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.

ADVERTISEMENT

ಆಶ್ರಮ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ವಿದ್ಯಾಭ್ಯಾಸ ಕುರಿತು ಚರ್ಚಿಸಿದ ಪೆದ್ದಪ್ಪಯ್ಯ ಅವರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಬೇಕಾದಂತಹ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದ್ ರೆಡ್ಡಿ, ಬಾಗೇಪಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.