
ಬಾಗೇಪಲ್ಲಿ: ಪಟ್ಟಣದ ವಿದ್ಯಾರ್ಥಿನಿಲಯದಲ್ಲಿ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ 3 ತಿಂಗಳ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನದ ತರಬೇತಿ ಕಾರ್ಯಾಗಾರ ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಆರ್.ಶಿವಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ಉಚಿತ ಉಟ, ವಸತಿ ಕಲ್ಪಿಸಿರುವುದನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಅಂಕ ಪಡೆಯಬೇಕು. ವಿದ್ಯಾರ್ಥಿಗಳಿಗೆ 3 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ವೃತ್ತಿಮಾರ್ಗದರ್ಶನದ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ಕೆಎಎಸ್, ಐಎಎಸ್, ಐಪಿಎಸ್, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಟಿಇಟಿ, ಬ್ಯಾಂಕಿಂಗ್, ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಹಾಗೂ ವೃತ್ತಿಗಳ ಬಗ್ಗೆ ವಿಷಯಗಳ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮುನಿರತ್ನಮ್ಮ, ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ಜಿ.ವಿ.ಚಂದ್ರಶೇಖರ್, ನಿಲಯ ಮೇಲ್ವಿಚಾರಕ ಎಸ್.ವೆಂಕಟೇಶ್, ಬಿ.ಎಸ್.ಕವಿತ, ರತ್ನಮಾಲಾ, ಎಂ.ಸಿ.ನರಸಿಂಹಪ್ಪ ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.