ಕಾಂಗ್ರೆಸ್
ಚಿಂತಾಮಣಿ: ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಪ್ರಚಾರ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ 27ರಂದು ಆಯೋಜಿಸಲಾಗಿದೆ ಎಂದು ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.
ನಗರದ ಮಾಳಪಲ್ಲಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಮಾವೇಶಕ್ಕೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಅನೇಕ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದರು. ವಿರೋಧ ಪಕ್ಷಗಳ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ಖಂಡಿಸಿದರು.
ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕೆ.ಪಿ. ಜಾನ್ ಮಾತನಾಡಿದರು.
ಪ್ರಚಾರ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಕೋನಪ್ಪಲ್ಲಿ ಕೋದಂಡ ಮಾತನಾಡಿದರು.
ಚಿಂತಾಮಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ ರೆಡ್ಡಿ, ಕಾಂಗ್ರೆಸ್ ಎಸ್.ಸಿ ವಿಭಾಗದ ಜಿಲ್ಲಾಧ್ಯಕ್ಷ ಸಿ.ಎನ್. ನಾರಾಯಣಸ್ವಾಮಿ, ಕಾರ್ಮಿಕ ಘಟಕದ ತಾಲ್ಲೂಕು ಅಧ್ಯಕ್ಷ ತಳಗವಾರ ಮುನಿರಾಜು, ಮುಖಂಡರಾದ ಸೂಲದೇನಹಳ್ಳಿ ವೆಂಕಟರಾಯಪ್ಪ ನರಸಿಂಹಪ್ಪ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.