ಸುಬ್ಬಾರೆಡ್ಡಿ
ಬಾಗೇಪಲ್ಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಮೂಲಕ ಜನರಿಗೆ ಉಚಿತ ಸೌಲಭ್ಯ ಕಲ್ಪಿಸಿದೆ. ಇದರ ಆರ್ಥಿಕ ಹೊರೆ ನಿಭಾಯಿಸಲು ಹಾಲು, ಡೀಸೆಲ್ ಬೆಲೆ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದರು.
ಮ್ಯಾಜಿಕ್ ಮಾಡಿ ಸರ್ಕಾರ ಈ ಹಣ ಹೊಂದಿಸಲು ಸಾಧ್ಯವೇ? ಜನರಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ತೆರಿಗೆ ಮೂಲಕ ಹಣ ಹೊಂದಿಸಬೇಕಾಗುತ್ತದೆ ಎಂದು ಹೇಳಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಬಿಜೆಪಿ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಬಿಜೆಪಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಟೋಲ್ ಏರಿಕೆ ಮಾಡಿದೆ. ಇದರ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಲಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.