ADVERTISEMENT

ಚಿಂತಾಮಣಿ: ರಾಜೀವ್ ಗೌಡಗೆ ಇಲ್ಲ ವಿಶೇಷ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 6:21 IST
Last Updated 30 ಜನವರಿ 2026, 6:21 IST
ರಾಜೀವ್ ಗೌಡ
ರಾಜೀವ್ ಗೌಡ   

ಚಿಂತಾಮಣಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬಂಧನವಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಇಲ್ಲಿನ ಉಪಕಾರಾಗೃಹದಲ್ಲಿರಿಸಲಾಗಿದೆ. 

ರಾಜೀವ್ ಗೌಡ ಅವರನ್ನು ವಿಚಾರಣಾಧೀನ ಕೈದಿಯಾಗಿ ಪರಿಗಣಿಸಲಾಗಿದ್ದು, ಅವರಿಗೆ ಯಾವುದೇ ವಿಶೇಷ ಸೌಲಭ್ಯಗಳನ್ನು ನೀಡಿಲ್ಲ. ಪ್ರತ್ಯೇಕ ಕೊಠಡಿ ನೀಡದೆ ವಿಚಾರಣಾಧೀನ ಕೈದಿಗಳ ಜೊತೆ ಇರಿಸಲಾಗಿದೆ. ಸಹ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜೀವ್ ಗೌಡ ಅವರಿಗೆ ನೀಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. 

ಅವರ ಭೇಟಿ ಮಾಡಲು ಬಂದ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಲಾಗಿತ್ತು. ಆದರೆ, ಅವರ ಬೆಂಬಲಿಗರಿಗೆ ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.