ಗುಡಿಬಂಡೆ: ಕೇಂದ್ರ ಸರ್ಕಾರ ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ಮೂಲಕ ಜನ ಸಾಮಾನ್ಯರ ಬದುಕಿಗೆ ಹೊರೆಯಾಗುವಂತೆ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಎದುರು ಜಮಾಯಿಸಿದ ಕಾರ್ಯಕರ್ತರು, ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ‘ಕೇಂದ್ರ ಸರ್ಕಾರ ಬಡವರ ಬದುಕಿನ ಮೇಲೆ ಚೆಲ್ಲಾಟವಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಚ್.ಪಿ.ಲಕ್ಷ್ಮಿನಾರಾಯಣ, ಪ್ರಕಾಶ್, ರಮೇಶ್, ಕೃಷ್ಣಗೌಡ, ರಿಯಾಝ್, ಆದಿರೆಡ್ಡಿ, ರಘುನಾಥ್ ರೆಡ್ಡಿ, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.