ADVERTISEMENT

ಕಾಂಗ್ರೆಸ್‌ ಬೂತ್‌ಮಟ್ಟದಲ್ಲಿ ಇನ್ನಷ್ಟು ಭದ್ರ: ವೆಂಕಟೇಶ್‌

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 4:56 IST
Last Updated 16 ನವೆಂಬರ್ 2020, 4:56 IST
ಬಾಗೇಪಲ್ಲಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್‌ ಮಾತನಾಡಿದರು. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಜರಿದ್ದರು
ಬಾಗೇಪಲ್ಲಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್‌ ಮಾತನಾಡಿದರು. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಜರಿದ್ದರು   

ಬಾಗೇಪಲ್ಲಿ: ‘ಕಾಂಗ್ರೆಸ್ ಭದ್ರಕೋಟೆಯನ್ನು ಇನ್ನಷ್ಟು ಭದ್ರಗೊಳಿಸುತ್ತಿರುವ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ನೇತೃತ್ವದಡಿ ಬೂತ್‌ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಮುಂಬರುವ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಕರೆ ನೀಡಿದರು.

ಪಟ್ಟಣದ ಶಾಂತಿನಿಕೇತನ ಶಾಲಾ ಆವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೂತ್‌ಮಟ್ಟದ ಸಮಿತಿಗಳ ರಚನಾ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಬಿಜೆಪಿಯ ಅನೈತಿಕ ಸರ್ಕಾರ ಇದೆ. ಕೆಲವರು ಕಾಂಗ್ರೆಸ್‌ನಲ್ಲಿದ್ದುಕೊಂಡು ಅಧಿಕಾರ ಅನುಭವಿಸಿ, ಮೋಸ ಬಗೆದು ಬಿಜೆಪಿಯಲ್ಲಿ ಅಧಿಕಾರ ಅನುಭವಿಸುತ್ತಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿಯವರು ಹಣ ಹಂಚಿ ಗೆದ್ದಿದ್ದಾರೆ. ಕಾಂಗ್ರೆಸ್ ಎಂದಿಗೂ ಕುಗ್ಗುವುದಿಲ್ಲ. ಮುಂಬರುವ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಬಿಡಿಗಾಸು ಬಿಡುಗಡೆ ಆಗಿಲ್ಲ. ಗ್ರಾಮಗಳಲ್ಲಿ ಮತ್ತಷ್ಟು ರಸ್ತೆ, ಕುಡಿಯುವ ನೀರು ಸೇರಿದಂತೆ ಅಭಿವೃದ್ಧಿ ಕಾರ್ಯಗಳು ಮಾಡಬೇಕಾಗಿದೆ. ಬೂತ್ ಮಟ್ಟದ ಸಮಿತಿಯ ಮುಖಂಡರು, ಕಾರ್ಯಕರ್ತರು ಮನೆ ಮನೆಗೂ ಸಂಚರಿಸಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಿ ಕ್ಷೇತ್ರದಲ್ಲಿ ಮತ್ತಷ್ಟು ಬಲಿಷ್ಠಗೊಳಿಸಬೇಕು’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ನರೇಂದ್ರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಮಾಜಿ ಅಧ್ಯಕ್ಷ ಎಸ್.ಎಸ್. ರಮೇಶ್ ಬಾಬು, ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ಹಿರಿಯ ಸದಸ್ಯ ಶ್ರೀನಿವಾಸರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.